ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ, ಏಳು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂಬತ್ತು ಜನರ ಪೈಕಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮಗು ಸೇರಿದಂತೆ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಎಂದು ಸ್ಥಳೀಯರು ಗುರುತಿಸಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೊಯ್ಡಾಗೆ ಸೇರಿದ ಒಂಭತ್ತು ಮಂದಿ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಆಗ್ರಾದಿಂದ ನೋಯ್ಡಾಗೆ ವ್ಯಾಗನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಸ್ತೆ ಮಧ್ಯದ ನೋಜಿಲ್‌ನಲ್ಲಿ ಮತ್ತೊಂದು ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಕಾರು ವೇಗವಾಗಿ ಬಂದಿದ್ದರಿಂದ ಅಪಘಾತದ ತೀವ್ರತೆ ಹೆಚ್ಚಿದ್ದು, ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ತಕ್ಷಣ ಸ್ಪಂದಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆ ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ವಿವರಗಳನ್ನು ಸಂಗ್ರಹಿಸಿ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!