ವ್ಯಾನ್​-ಬಸ್​ ನಡುವೆ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಸ್​ ಹಾಗೂ ವ್ಯಾನ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ನಡೆದಿದೆ.

ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು,ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಬಂಗಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿದೆ. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಅವರನ್ನು ಜೈಪುರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಕಾರ್‌ನಿಂದ ನಾಗೌರ್‌ಗೆ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ ಎಂದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!