ಕೊಡಗು ಜಿಲ್ಲೆಯಲ್ಲಿ 7 ಹೊಸ ಕೋವಿಡ್ ಪ್ರಕರಣ ದೃಢ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸೋಮವಾರ 7 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ಒಂದು, ಸೋಮವಾರಪೇಟೆ ತಾಲೂಕಿನಲ್ಲಿ 2 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 4 ಹೊಸ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,632 ರಷ್ಟಾಗಿದ್ದು,‌ಕಳೆದ 24 ಗಂಟೆಗಳಲ್ಲಿ 102 ಮಂದಿ‌ ಗುಣಮುಖರಾಗುವುದರೊಂದಿಗೆ ಇದುವರೆಗೆ ‌46,976ಮಂದಿ ಸೋಂಕು ಮುಕ್ತರಾಗಿದ್ದಾರೆ. ಅಲ್ಲದೆ‌ ಒಟ್ಟು 451 ಮಂದಿ‌ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 205 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 51 ಹಾಗೂ ಪಾಸಿಟಿವಿಟಿ ಪ್ರಮಾಣ ಶೇ.15.21 ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!