ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ರೊಹ್ತಾಸ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಸಸಾರಂ ಪಟ್ಟಣದ ಶಿವಸಾಗರ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ರಸ್ತೆಯ ಪಕ್ಕ ನಿಂತಿದ್ದ ಟ್ರಕ್ ಗೆ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಈ ಕುಟುಂಬವು ಜಾರ್ಖಂಡ್ ನ ರಾಜರಪ್ಪ ದೇವಸ್ಥಾನದಿಂದ ಹಿಂತಿರುಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ರಾಜಮತಿ ದೇವಿ(55), ಸೋನಿ ಕುಮಾರಿ (35), ಅರವಿಂದ್ ಶರ್ಮಾ(40), ಆದಿತ್ಯ (8), ರಿಯಾ ಕುಮಾರಿ (9), ತರಾ ಕುಮಾರಿ (22) ಮತ್ತು ಚಾಂದಿನಿ ಕುಮಾರಿ (15) ಮೃತ ದುರ್ದೈವಿಗಳು.
ಘಟನೆಯಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.