ಬಸ್‌- ಟಾಟಾ ಸುಮೋ ಕಾರು ಡಿಕ್ಕಿ: 7 ಮಂದಿ ಸಾವು, 14 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 14 ಜನ ಗಾಯಗೊಂಡಿರಯವ ಘಟನೆ ತಮಿಳುನಾಡಿನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಾಂನಲ್ಲಿ ಈ ದುರಂತ ಸಂಭವಿಸಿದೆ. ಧರ್ಮಪುರಿಯಿಂದ ತಿರುವಣ್ಣಾಮಲೈಗೆ ಸರ್ಕಾರಿ ಬಸ್​ ತೆರಳುತ್ತಿತ್ತು ಮತ್ತು ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಟಾಟಾ ಸುಮೋ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ 4 ಮಂದಿ ಮತ್ತು ಬಸ್​ನಲ್ಲಿದ್ದ 10 ಮಂದಿ ಸೇರಿ ಒಟ್ಟು 14 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆ ಮತ್ತು ಚೆಂಗಾಮ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!