7 ಶೇಕಡಾ ಆರ್ಥಿಕ ಬೆಳವಣಿಗೆ ಅಂದಾಜು, ʼಅಮೃತಕಾಲʼದ ಮೊದಲ ಬಜೆಟ್‌ ಆರಂಭಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2023ರ ಬಜೆಟ್‌ ಮಂಡನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆರಂಭಿಸಿದ್ದು ಈ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತೆಯ ಬೆಳವಣಿಗೆಯನ್ನು 7 ಸೇಕಡಾ ಎಂದು ಅಂದಾಜಿಸಲಾಗಿದೆ. ಜಾಗತಿಕ ಸವಾಲುಗಳ ಹೊರತಾಗಿಯೂ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ ಮತ್ತು ವ್ಯಾಪಕ-ಶ್ರೇಣಿಯ ಸುಧಾರಣೆಗಳ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸುವ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಮ್ಮ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ ಉಲ್ಲೇಖಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯೊಂದಿಗೆ ಯಾರೂ ಹಸಿವಿನಿಂದ ಮಲಗುವುದಿಲ್ಲ ಎಂದು ನಾವು ಖಚಿತಪಡಿಸಿದ್ದೇವೆ. ಮುಂದಿನ 1 ವರ್ಷಕ್ಕೆ ಎಲ್ಲಾ ಅಂತ್ಯೋದಯ ಮನೆಗಳಿಗೆ ಜನವರಿ 1, 2023 ರಿಂದ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯನ್ನು ನಾವು ಜಾರಿಗೊಳಿಸುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದು ಸ್ವಾತಂತ್ರ್ಯದ 75 ನೇ ವರ್ಷಾವಚರಣೆಯ ಹಿನ್ನೆಲೆಯಲ್ಲಿ ʼಅಮೃತ ಕಾಲದ ಮೊದಲ ಬಜೆಟ್‌ʼ ಇದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!