ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಯ ಆವರಣದ ಪಕ್ಕದಲ್ಲಿದ್ದ ನೇರಳೆ ಹಣ್ಣು ತಿಂದು 7 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪುತ್ರಸೊನ್ನೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ವೇಳೆ ಊಟದ ಬಳಿಕ ಶಾಲೆಯ ಆವರಣದಲ್ಲಿದ್ದ ನೇರಳೆ ತಿನ್ನುತ್ತಿದ್ದಂತೆ 7 ಜನ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ಕೂಡಲೆ ಎಚ್ಚೆತ್ತ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ.