ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆ ಸಮಾರಂಭವೊಂದರಲ್ಲಿ ರಸಗುಲ್ಲಾ ತಿಂದ ಸುಮಾರು 70 ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಕನ್ನೌಜ್‌ನ ಹಳ್ಳಿಯೊಂದರಲ್ಲಿ ಮದುವೆಯ ಔತಣಕೂಟವೊಂದರಲ್ಲಿ ಆಹಾರ ಸೇವಿಸಿದ ನಂತರ ಮಕ್ಕಳು ಸೇರಿದಂತೆ ಸುಮಾರು 70 ಜನರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ದಾಖಲಾದ ಅಸ್ವಸ್ಥರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರನ್ನು ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.