Wednesday, August 17, 2022

Latest Posts

70 ಕೋಟಿ ರೂ.ವೆಚ್ಚದಲ್ಲಿ ಐಎಂಎಚ್ ಸ್ಥಾಪನೆ: ಸಚಿವ ಆನಂದ ಸಿಂಗ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಬಳ್ಳಾರಿ:

ಸಂಡೂರು ಮತ್ತು ಹೊಸಪೇಟೆ ಮಧ್ಯಭಾಗದಲ್ಲಿ 70 ಕೋಟಿ ರೂ.ವೆಚ್ಚದಲ್ಲಿ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಹೋಟಲ್ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಡಿಎಂಎಫ್ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಶೀಘ್ರದಲ್ಲಿಯೇ ಐಎಂಎಚ್ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಿಂಗ್ ದೇಶದಲ್ಲಿ 17 ಕಡೆ ಐಎಂಎಚ್‍ಗಳಿವೆ. ಬಳ್ಳಾರಿ ಕೋಟೆಗೆ ರೋಪ್ ವೇ ನಿರ್ಮಿಸುವಂತೆ ಮನವಿ ಬಂದಿದ್ದು,ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದರು.
ಡಿಎಂಎಫ್‍ಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ನನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ವೇಗ ನೀಡಲು ಸೂಚಿಸಲಾಗಿದೆ ಎಂದರು. ವಿಜಯನಗರ ಜಿಲ್ಲೆಯಲ್ಲಿ ಅಕ್ಟೋಬರ್ ಅಂತ್ಯದೊಳಗೆ 11 ಇಲಾಖೆಗಳು ಕಾರ್ಯಾರಂಭ ಮಾಡಲಿವೆ ಎಂದರು. ಈ ಸಂದರ್ಭದಲ್ಲಿ
ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಸೇರಿದಂತೆ ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!