Tuesday, March 21, 2023

Latest Posts

ರಾಜ್ಯ ಬಜೆಟ್| 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು – ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು,69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು ಮಾಡುವುದಾಗಿ ಹೇಳಿದ್ದಾರೆ.

ಜಗಳೂರು ಸೇರಿದಂತೆ ವಿವಿಧ ಕೆರೆಗಳನ್ನು ತುಂಬಿಸಲು ಕ್ರಮ. 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 49,031 ಕೋಟಿ ಮೀಸಲು. ಎಸ್​ಸಿ, ಎಸ್​ಟಿ ನಿಗಮಗಳಿಗೆ 795 ಕೋಟಿ ರೂ. ಒದಗಿಸಲಾಗಿದೆ ಎಂದಿದ್ದಾರೆ. ಎಸ್​ಸಿ, ಎಸ್​ಟಿ ಬಿಪಿಎಲ್ ಕಾರ್ಡ್​ ಹೊಂದಿದವರಿಗೆ ಅಮರ್ ಜ್ಯೋತಿ ಯೋಜನೆಯಡಿ 75 ಯೂನಿಟ್ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಿಸಿದ್ದಾರೆ.

ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಆರ್ಥಿಕ ಭದ್ರತೆ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ ಒದಗಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!