ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ: 4 ಮಂದಿ ಸಾವು, 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎರಡು ಖಾಸಗಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರಂತ ಸಂಭವಿಸಿದೆ. ಎರಡು ಖಾಸಗಿ ಬಸ್‌ಗಳು ಕಡಲೂರು ಮತ್ತು ಪನ್ರುತಿ ನಡುವೆ ಸಂಚರಿಸುತ್ತಿದ್ದವು. ಈ ವೇಳೆ ಬಸ್​ನ ಮುಂಭಾಗದ ಟೈರ್​ ಬರ್ಸ್ಟ್​ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಕಡಲೂರಿನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!