70ರ ಅಜ್ಜಿಯ ಮೇಲೆ ಮೊಮ್ಮಗನಿಂದ ಅತ್ಯಾಚಾರ: ವೃದ್ಧೆಯ ಆರೋಗ್ಯ ಸ್ಥಿತಿ ಚಿಂತಾಜನಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ತನ್ನ ಸ್ವಂತ ಅಜ್ಜಿಯ ಮೇಲೆ ಮೊಮ್ಮಗನೋರ್ವ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಜಾರ್ಖಂಡ್​ನ ದುಮ್ಕಾದಲ್ಲಿ ನಡೆದಿದೆ. ವೃದ್ಧೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು , ಫೂಲ್ ಜಾನೋ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿನ ದುಮ್ಕಾ ಜಿಲ್ಲೆಯ ಟೋಂಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಯುವಕ ತನ್ನ ಅಜ್ಜಿಯ ಮೈಮೇಲೆರಗಿದ್ದಾನೆ. ಇತ ಇಲ್ಲಿಯೇ ಸೈಕಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದು, ನಿನ್ನೆ ಅಜ್ಜಿ ಮನೆಗೆ ಹೋಗಿದ್ದ.ಈ ಸಂದರ್ಭದಲ್ಲಿ ಮನೆಯಲ್ಲಿ ಅಜ್ಜಿ ಒಬ್ಬಳೇ ಇರುವುದನ್ನು ಗಮನಿಸಿದ ಆತ ಅತ್ಯಾಚಾರ ಎಸಗಿದ್ದಾನೆ.
ಇದರ ಬೆನ್ನಲ್ಲೇ ಕುಟುಂಬಸ್ಥರಿಗೆ ಮಾಹಿತಿ ಗೊತ್ತಾಗಿದೆ. ಕೃತ್ಯದಿಂದ ಚಿಂತಾಜನಕ ಸ್ಥಿತಿ ತಲುಪಿರುವ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!