Monday, July 4, 2022

Latest Posts

ಕೊಡಗು| ಜಿಲ್ಲೆಯಲ್ಲಿ 73 ಮಂದಿಗೆ ಕೋವಿಡ್ ಸೋಂಕು: ಗುಣಮುಖರಾದವರೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಶನಿವಾರ ಮತ್ತೆ 73 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಕಳೆದ 24ಗಂಟೆಗಳಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 29, ಸೋಮವಾರಪೇಟೆ ತಾಲೂಕಿನಲ್ಲಿ 22 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇದುವರೆಗೆ ಜಿಲ್ಲೆಯಲ್ಲಿ‌ ಒಟ್ಟು 33,512 ಮಂದಿಯಲ್ಲಿ ಸೋಂಕು ದೃಢಪಟ್ಟಂತಾಗಿದ್ದು, ಕಳೆದ 24 ಗಂಟೆಗಳಲ್ಲಿ
65 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು32,558ಮಂದಿ ಸೋಂಕಿನಿಂದ ಮುಕ್ತರಾದಂತಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 412 ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ 542 ಸಕ್ರಿಯ ಪ್ರಕರಣಗಳಿವೆ.ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 81ರಷ್ಟಿದ್ದರೆ, ಪಾಸಿಟಿವಿಟಿ ದರ ಶೇ.1.48ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss