73ನೇ ಗಣರಾಜ್ಯೋತ್ಸವ ಸಂಭ್ರಮ: ಬಳ್ಳಾರಿಯಲ್ಲಿ ಧ್ವಜಾರೋಹಣ ‌ನೆರವೇರಿಸಿದ ಸಚಿವ ಬಿ.ಶ್ರೀರಾಮುಲು

ದಿಗಂತ ವರದಿ ಬಳ್ಳಾರಿ:

ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಬುಧವಾರ, ತವರು ಜಿಲ್ಲೆ ಬಳ್ಳಾರಿಯಲ್ಲಿ 73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ‌ನೆರವೇರಿಸಿದರು.
16 ವರ್ಷಗಳ ಬಳಿಕ ಸಚಿವ ಶ್ರೀರಾಮುಲು ಅವರಿಗೆ ತವರು ಜಿಲ್ಲೆಯ ಉಸ್ತುವಾರಿ ದೊರೆತಿದ್ದು, ಸಚಿವರು, ಶಾಸಕರು ಸೇರಿದಂತೆ ಅಭಿಮಾನಿಗಳು, ಬೆಂಬಲಿಗರಲ್ಲಿ, ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ಧ್ವಜಾರೋಹಣ ‌ನೆರವೇರಿಸಿ ಮಾತನಾಡಿದರು.

ಇದಕ್ಕೂ‌ ಮುನ್ನ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ಸ್ಥಂಭದ ಬೃಹತ್‍ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ,, ಬುಡಾ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಜಿ.ಪಂ. ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!