Tuesday, August 16, 2022

Latest Posts

ದೇಶಾದ್ಯಂತ 74 ಕೋಟಿ ಕೊರೋನಾ ಲಸಿಕೆ ಡೋಸ್‌ ವಿತರಣೆ: ಕೇಂದ್ರ ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಕೊರೊನಾ ಲಸಿಕೆ ವಿಸ್ತಾರವಾಗುತ್ತಿದ್ದು, 74 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್​ ಮಾಡಿರುವ ಸಚಿವಾಲಯವು, ‘ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಭಾರತವು ಮತ್ತೊಂದು ಸಾಧನೆಯೊಂದಿಗೆ ಮುನ್ನಡೆಯುತ್ತಿದೆ. ಇಲ್ಲಿಯವರೆಗೆ 74 ಕೋಟಿ ಕೋವಿಡ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ’ ಎಂದು ಹೇಳಿದೆ.
ಕೊರೋನಾ ಮೂರನೇ ಅಲೆ ಭೀತಿ ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಉತ್ಸವ ಆಯೋಜಿಸಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss