Saturday, January 28, 2023

Latest Posts

ಜಗನ್ನಾಥ ಭವನದಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ: ಭಾರತಮಾತೆಗೆ ಪುಷ್ಪನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ 74ನೇ ವರ್ಷದ ಗಣರಾಜೋತ್ಸವದ ಆಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಮಾತನಾಡಿ, ದೇಶದ ಇತಿಹಾಸದಲ್ಲೇ ಗಣರಾಜ್ಯೋತ್ಸವವು ಅತ್ಯಂತ ಮಹತ್ವದ ಮತ್ತು ಸಂಭ್ರಮದ ದಿನವಾಗಿದೆ. ಸಂವಿಧಾನವನ್ನು ಅಳವಡಿಸಿಕೊಂಡ ದಿನ ಇದಾಗಿದೆ ಎಂದು ತಿಳಿಸಿದರು.

ಗಣ್ಯರೆಲ್ಲರೂ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷ ಜಿ. ಮಂಜುನಾಥ್, ಮುಖಂಡರು ಮತ್ತು ಕಾರ್ಯಾಲಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!