Sunday, February 5, 2023

Latest Posts

ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ: ಗೌರವ ವಂದನೆ ಸ್ವೀಕರಿಸಿದ ಗೆಹ್ಲೋಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಧ್ವಜಾರೋಹಣದ ಬಳಿಕ ಕಲಾತಂಡಗಳಿಂದ ಪ್ರದರ್ಶನ ನಡೆಯಲಿದೆ. ಸುಮಾರು ಏಳು ಸಾವಿರ ಜನರಿಗೆ ಪಥಸಂಚಲನ ವೀಕ್ಷಿಸಲು ಅವಕಾಶವಿದೆ. ಪೊಲೀಸ್‌ ಇಲಾಖೆ, ವಿದ್ಯಾರ್ಥಿಗಳಿಂದ ಪರೇಡ್‌ ನಡೆಯಲಿದೆ. ಇದೇ ವೇಳೆ ಸಮಸ್ತ ನಾಡಿದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

ʻನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಿ, ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ.ʼ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!