24 ಗಂಟೆಗಳಲ್ಲಿ ದೇಶದಲ್ಲಿ 756 ಹೊಸ ಕೊರೋನಾ ಪ್ರಕರಣ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 756 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಐವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕೇರಳ, ಮಹಾರಾಷ್ಟ್ರದಲ್ಲಿ ತಲಾ 2 ಹಾಗೂ ಜಮ್ಮು ಕಾಶ್ಮೀರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 154 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇಬ್ಬರು ಮೃತಪಟ್ಟಿದ್ದಾರೆ. ಇದೀಗ 139 ಜೆಎನ್​.1 ಪ್ರಕರಣಗಳು ಪತ್ತೆಯಾಗಿವೆ. 14,790 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ, ಇದರಲ್ಲಿ 12,369 ರಾಪಿಡ್ ಆಂಟಿಜೆನ್ ಪರೀಕ್ಷೆ ಮತ್ತು 2421 ಆರ್​ಟಿಪಿಸಿಆರ್​ ವಿಧಾನ ಮೂಲಕ ಪರೀಕ್ಷೆ ನಡೆಸಲಾಗಿದೆ.

ಭಾರತದಲ್ಲಿ ಇಲ್ಲಿಯವರೆಗೆ 220,67,81,345 ಲಸಿಕೆಗಳನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!