ಅಲೆಗಳ ಹೊಡೆತಕ್ಕೆ ಸಿಲುಕಿದ ದೋಣಿ, ನೈಜಿರಿಯಾದಲ್ಲಿ 76 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಜೀರಿಯಾದಲ್ಲಿ ಅಲೆಯ ಹೊಡೆತಕ್ಕೆ ಸಿಲುಕಿ ದೋಣಿ ಮುಳುಗಿದ್ದು, 76 ಮಂದಿ ಮೃತಪಟ್ಟಿದ್ದಾರೆ.

ಅನಾಂಬ್ರಾದಲ್ಲಿ 85 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪ್ರವಾಹಕ್ಕೆ ಸಿಲುಕಿದ್ದು, 76 ಮಂದಿ ಮೃತಪಟ್ಟಿದ್ದಾರೆ. ನೈಜೀರಿಯಾ ಅಧ್ಯಕ್ಷ ಮುಹಮ್ಮದ್ ಬುಹಾರಿ ವಿಷಾದ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯ ತ್ವರಿತಗೊಂಡಿದೆ ಎಂದಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಬಗ್ಗೆ ಈವರೆಗೂ ಯಾವುದೇ ಮಾಹಿತಿ ದೊರಕಿಲ್ಲ. ಇನ್ನು ಮುಂದೆ ಈ ರೀತಿ ಘಟನೆಗಳು ನಡೆಯದಂತೆ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!