ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 769 ಮಂದಿಗೆ ಕೊರೋನಾ

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಭಾನುವಾರ 769 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 684 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 547 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 51,570 ಹೊಸ ಪ್ರಕರಣ

ಕೇರಳದಲ್ಲಿ ಭಾನುವಾರ ಹೊಸದಾಗಿ 51,570 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 47,776 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 32,701 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 14 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 47.06 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!