76ನೇ ಗಣರಾಜ್ಯೋತ್ಸವ: ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಧ್ವಜಾರೋಹಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರೆ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.

 

ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಇನ್ನು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರ್ತವ್ಯ ಪಥದಲ್ಲಿ ನಡೆಯುವ ಮೆರವಣಿಗೆಯನ್ನು ದೇಶದ ವಿವಿಧ ಭಾಗಗಳಿಂದ ಸಂಗೀತ ವಾದ್ಯಗಳೊಂದಿಗೆ 300 ಸಾಂಸ್ಕೃತಿಕ ಕಲಾವಿದರು ‘ಸಾರೆ ಜಹಾನ್ ಸೆ ಅಚ್ಛಾ’ ನುಡಿಸುವ ಮೂಲಕ ಚಾಲನೆ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!