ಹೊಸ ದಿಗಂತ ಆನ್ ಡೆಸ್ಕ್:
77ರ ಹರೆಯದಲ್ಲೂ ಜಿಮ್ನಲ್ಲಿ ಸಿಎಂ ಯಡಿಯೂರಪ್ಪನವರು ವರ್ಕ್ಔಟ್ ಮಾಡಿದ್ದಾರೆ. ಹೌದು, ಕೆ ಎ ಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಭವನದ ಶಂಕುಸ್ಥಾಪನೆ ಜಿಮ್ನ ಲೋಕಾರ್ಪಣೆ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಭಿನ್ನ ರೀತಿಯಲ್ಲಿ ಉದ್ಘಾಟನೆ ಮಾಡಲು ಮುಂದಾದರು.
ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಘದಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ಅವರು ಜಿಮ್ ನಲ್ಲಿ ಕಸರತ್ತು ಮಾಡುವ ಮೂಲಕ ಜಿಮ್ ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಆಡಳಿತ ಸುಧಾರಣಾ ಆಯೋಗ-2 ಅಧ್ಯಕ್ಷ ವಿಜಯ ಭಾಸ್ಕರ್ ಹಾಗೂ ಕೆಎಎಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.