spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

78 ಕೋಟಿ ರೂ. ವೆಚ್ಚದಲ್ಲಿ ಕೊಡಗಿನ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಲಿವೆ: ಸಂಸದ ಪ್ರತಾಪ್‍ ಸಿಂಹ

- Advertisement -Nitte

ಮಡಿಕೇರಿ : ಪ್ರವಾಸೋದ್ಯಮದ ಅಭಿವೃದ್ಧಿಗೆ ರಸ್ತೆಗಳ ಅಭಿವೃದ್ಧಿ ಅತಿ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು  ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್‍ಸಿಂಹ ಹೇಳಿದರು.

ಸೋಮವಾರಪೇಟೆಯಲ್ಲಿ ಪಶುವೈದ್ಯಕೀಯ ಆಸ್ಪತ್ರೆಗಳ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಡಿಕೇರಿ-ಸಂಪಾಜೆ ರಸ್ತೆಯಲ್ಲಿ ಭೂ ಕುಸಿತದಿಂದ ಹಾನಿಗೊಳಗಾದ ಸ್ಥಳಗಳಲ್ಲಿ 59 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ. ಮಡಿಕೇರಿ-ಕುಶಾಲನಗರ ರಸ್ತೆಯು 30 ಕೋಟಿ ರೂ. ವೆಚ್ಚದಲ್ಲಿ ಡಾಮರೀಕರಣಗೊಳ್ಳಲಿದೆ ಎಂದು ತಿಳಿಸಿದರು.

ಚೆನ್ನರಾಯಪಟ್ಟಣ-ಮಾಕುಟ್ಟ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಡಿಪಿಆರ್ ಹಂತದಲ್ಲಿದ್ದು, ಶೀಘ್ರವೇ ಅನುಮೋದನೆ ದೊರೆಯಲಿದೆ. ಆ ಮೂಲಕ ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮೈಸೂರು ಮತ್ತು ಕುಶಾಲನಗರ ನಡುವಿನ ರೈಲ್ವೆ ಕಾಮಗಾರಿ ಕೂಡ ಶೀಘ್ರದಲ್ಲಿಯೇ ಆರಂಭಗೊಳ್ಳಲಿದ್ದು, 1854 ಕೋಟಿ ರೂ.ವೆಚ್ಚದಲ್ಲಿ ಕುಶಾಲನಗರದ ತನಕ ರೈಲ್ವೆ ಲೈನ್ ಬರಲಿದೆ. ಮೈಸೂರಿನಿಂದ ಗುಡ್ಡೆಹೊಸೂರು ತನಕ 3120 ಕೋಟಿ ರೂ.ವೆಚ್ಚದ 4 ಲೈನ್ ಹೈವೆ ಕಾಮಗಾರಿಯ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss