Monday, October 13, 2025

79ನೇ ಸ್ವಾತಂತ್ರ್ಯ ದಿನ: ಸತತ 12ನೇ ಬಾರಿಗೆ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 12ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ಮಾಡುತ್ತಿದ್ದಾರೆ.

ಶೀಘ್ರದಲ್ಲೇ ದೇಶವನ್ನುದ್ದೇಶಿಸಿ ತಮ್ಮ ಸತತ 12 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಪ್ರಾರಂಭಿಸಲಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ರಾಜ್​ಘಾಟ್​​ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಇದಾದ ಮೇಲೆ ಕೆಂಪು ಕೋಟೆ ಕಡೆಗೆ ಆಗಮಿಸಿದರು. ಈ ವೇಳೆ ರಕ್ಷಣಾ ಸಚಿವರು ಪ್ರಧಾನಿಗಳನ್ನು ಸ್ವಾಗತ ಮಾಡಿದರು. ಎಲ್ಲರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.

error: Content is protected !!