Wednesday, July 6, 2022

Latest Posts

ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಲ್ಲಿ 79 ಲಕ್ಷ ಡೋಸ್‌ ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಸಚಿವಾಲಯ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 79 ಲಕ್ಷಕ್ಕೂ ಹೆಚ್ಚು ಕೊರೋನಾ ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 17 ಲಕ್ಷಗಳಷ್ಟು ಡೋಸ್‌ಗಳನ್ನು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
ಕೇಂದ್ರ ಸರ್ಕಾರವು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 16.37 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಿದೆ. ಸದ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ ಲಸಿಕೆಯ 79,13,518 ಡೋಸ್‌ಗಳು ಲಭ್ಯವಿದೆ. ವ್ಯರ್ಥದ ಪ್ರಮಾಣವೂ ಸೇರಿದಂತೆ ಈವರೆಗೆ ಒಟ್ಟು 15 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಬಳಸಲಾಗಿದೆಎಂದು ಸಚಿವಾಲಯ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss