ಬಿಜೆಪಿಯಿಂದ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ: ಚಿತ್ರದುರ್ಗದಿಂದ ಗೋವಿಂದ ಕಾರಜೋಳ ಸ್ಪರ್ಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಲೋಕಸಭೆ ಚುನಾವಣೆಗೆ ಬಿಜೆಪಿ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಕೇಂದ್ರ ಸಚಿವ ನಾರಾಯಣ ಸ್ವಾಮಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತ ತೋರದ ಕಾರಣ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಲಾಗಿದೆ.

ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್‌ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರಕ್ಕೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!