ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.41 ಲಕ್ಷ ವಿದ್ಯಾರ್ಥಿಗಳು ಹಾಜರು: ನಾಲ್ವರು ಶಿಕ್ಷಕರು ಅಮಾನತು

ಹೊಸದಿಗಂತ ವರದಿ,ಬೆಂಗಳೂರು:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು ೮.೪೧ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-೧ ಕ್ಕೆ ಹಾಜರಾಗಿದ್ದು ಈ ಪೈಕಿ ಒಬ್ಬರು ಡಿಬಾರ್ ಆಗಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಶನಿವಾರ ವಿಜ್ಞಾನ ವಿಷಯದ ಪರೀಕ್ಷೆ ನಡೆದಿದೆ. ಈ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿಭಾಗದಿಂದ ೪೭,೪೯೮ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ೬೦,೫೪೮ ವಿದ್ಯಾರ್ಥಿಗಳು, ರಾಮನಗರದಲ್ಲಿ ೧೨,೮೯೯, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ೧೪,೧೬೨ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ತಿಳಿಸಿದೆ.

ವಿಜ್ಞಾನದ ಪರೀಕ್ಷೆಗೆ ಒಟ್ಟಾರೆಯಾಗಿ ೮,೫೬,೭೫೦ ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ೮,೪೧,೪೩೯ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬಾಗಲಕೋಟೆಯಲ್ಲಿ ನಕಲಿಗೆ ಯತ್ನಿಸಿರುವ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಹಾಗೂ ೧೫,೩೧೧ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟು ಶೇ.೯೮.೨ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಚಿತ್ರದುರ್ಗದಲ್ಲಿ ನಾಲ್ವರು ಶಿಕ್ಷಕರು ಅಮಾನತು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಎಸ್‌ಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಕಲು ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟ ನಾಲ್ವರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದ್ದು, ಚಳ್ಳಕೆರೆಯ ಮಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ, ಚಳ್ಳಕೆರೆಯ ಗೋಸಿಕೆರೆ ಶಾಲೆಯ ರಾಘವೇಂದ್ರ, ಪಿ.ಓಬನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಹಾಗೂ ಕೋರ್ಲಕುಂಟೆ ಹಿರಿಯ ಪ್ರಾಥಮಿಕ ಶಾಲೆಯ ಪ್ರಕಾಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಲೋಪ, ಬೇಜವಾಬ್ದಾರಿ, ನಿಲ್ಯಕ್ಷ್ಯದ ಹಿನ್ನೆಲೆಯಲ್ಲಿ ಈ ನಾಲ್ವರು ಶಿಕ್ಷಕರನ್ನು ಅಮಾನುಗೊಳಿಸಿ ಡಿಡಿಪಿಐ ರವಿಶಂಕರರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!