ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಾ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು. ಆದರೆ, ಕೇಂದ್ರ ರಸಗೊಬ್ಬರ ಇಲಾಖೆ ರಾಜ್ಯದ ರೈತರ ಹಿತದೃಷ್ಟಿಯಿಂದ ಸಕಾಲಿಕವಾಗಿ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಿದೆ, ರಾಜ್ಯದಲ್ಲಿ ಪ್ರಸ್ತುತ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.