ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ವಿಮಾನ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಏರ್ ಇಂಡಿಯಾ ಸಂಸ್ಥೆ ಈಗ ವಿಮಾನಗಳ ತಾಂತ್ರಿಕ ಪರಿಶೀಲನೆಗೆ ಮುಂದಾಗಿದೆ.
ಈ ಹಿನ್ನೆಲೆ ದೇಶಾದ್ಯಂತ 8 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಜೊತೆಗೆ ಜು.15ರವರೆಗೆ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನವನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ ಎಂದು ವರದಿಯಾಗಿದೆ.
ಜೂ.12ರ ಅಹಮದಾಬಾದ್ ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನಗಳಲ್ಲಿ ಒಂದಿಲ್ಲೊಂದು ದೋಷಗಳು ಕಾಣಿಸಿಕೊಳ್ಳುತ್ತಲೇ ಇದೆ. ಹೀಗಾಗಿ ವಿಮಾನಗಳಲ್ಲಿನ ತಾಂತ್ರಿಕ ಸಮಸ್ಯೆ ಹಾಗೂ ಇನ್ನಿತರ ಪರಿಶೀಲನೆ ನಡೆಸಲು ಮುಂದಾಗಿದೆ.