ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಗೋವಾದ 8 ಕಾಂಗ್ರೆಸ್‌ ಶಾಸಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಗೋವಾ ರಾಜಕೀಯದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ 8 ಮಂದಿ ಕಾಂಗ್ರೆಸ್‌ ಶಾಸಕರು ಬಿಜೆಪಿ ಪಾಳಯವನ್ನು ಸೇರಿಕೊಳ್ಳಲಿದ್ದಾರೆ. ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಇಂದು ಗೋವಾದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ತಿಳಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಕೇವಲ ಮೂವರು ಶಾಸಕರು ಮಾತ್ರ ಉಳಿಯಲಿದ್ದಾರೆ.

ಬಿಜೆಪಿ ಸೇರ್ಪಡೆಗೊಳ್ಳುತ್ತಿರುವ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಅವರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಈ ಬೆಳವಣಿಗೆಯ ಬಗ್ಗೆ ಈ ಹಿಂದೆ ಸುಳಿವು ನೀಡಿದ್ದರು. ಈ ಕುರಿತು ಅವರು “ಕೋಗಿಲೆ ಹಕ್ಕಿ ಕೂಗುತ್ತಿದೆ, ಹಿಂದಿನ ಪೋರ್ಚುಗೀಸ್ ಪ್ರಾಂತ್ಯದಲ್ಲಿ ಏನೋ ಅಡುಗೆ ಮಾಡುತ್ತಿದೆ. ಉತ್ತಮ ವಾಸನೆ ಇಲ್ಲ.! ಕೋಗಿಲೆ ಹಕ್ಕಿ ತಪ್ಪಾಗಿದೆ ಎಂದು ಭಾವಿಸುತ್ತೇವೆ.” ಎಂದು ಟ್ವೀಟ್‌ ಮಾಡಿದ್ದರು. ಆದರೀಗ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವುದು ಖಚಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!