Saturday, August 13, 2022

Latest Posts

ರಷ್ಯಾದ ವಿವಿಯಲ್ಲಿ ಗುಂಡಿನ ದಾಳಿ: ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಜಿಗಿದ ವಿದ್ಯಾರ್ಥಿಗಳು

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಷ್ಯಾದ ಪರ್ಮ್ ವಿಶ್ವವಿದ್ಯಾಲಯದಲ್ಲಿ ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ ನಡೆದಿದೆ. ಈ ವೇಳೆ 8 ಮಂದಿ ಮೃತಪಟ್ಟಿದ್ದು, ಕನಿಷ್ಠ 6 ಮಂದಿ ಗಾಯಗೊಂಡಿದ್ದಾರೆ.
ಈ ಬಗ್ಗೆ ವರದಿ ಮಾಡಿದ ರಷ್ಯಾಸುದ್ದಿ ಸಂಸ್ಥೆ, ಪರ್ಮ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಅಪರಿಚಿತ ವ್ಯಕ್ತಿ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ವಿದ್ಯಾರ್ಥಿಗಳು ಆಡಿಟೋರಿಯಂ ನ ಕಿಟಕಿಯಿಂದ ಜಿಗಿದು ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾರೆ. ಗುಂಡಿನ ದಾಳಿಗೆ 8 ಮಂದಿ ಮೃತಪಟ್ಟಿದ್ದು,  6ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸ್ಥಳದಲ್ಲಿ ರಷ್ಯಾ ತನಿಖಾ ತಂಡ ಕಾರ್ಯಾಚರಣೆ ನಡೆಸಿ 18 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತನ ಬಳಿ ಇದ್ದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss