ಕಾರು-ಟ್ರಕ್‌ ನಡುವೆ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರು ಮತ್ತು ಟ್ರಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಸಾವು ಮತ್ತು ಇಬ್ಬರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಸಾದಿಕಾಬಾದ್‌ನಲ್ಲಿ ಶನಿವಾರ ನಡೆದಿದೆ.

ಸಾದಿಕಾಬಾದ್‌ನ ಮೋಟರ್‌ವೇ M-5 ನಲ್ಲಿ ಕಾರು ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದ್ದು, ಕಾರು ವೇಗವಾಗಿ ಚಲಿಸುತ್ತಿದ್ದುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಅಪಘಾತಕ್ಕೀಡಾಗಿ ಮೃತಪಟ್ಟವರಲ್ಲಿ ವಧು, ಮಹಿಳೆ ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ಬಳಿಕ ಗಾಯಾಳುಗಳನ್ನು ಶೇಖ್ ಜೈದ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!