ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ವ ದಕ್ಷಿಣ ಆಫ್ರಿಕಾದ ನಗರವಾದ ಡರ್ಬನ್ ಬಳಿಯ ಪುರುಷರ ಹಾಸ್ಟೆಲ್‌ನ ಕೊಠಡಿಯೊಂದಕ್ಕೆ ಏಕಾಏಕಿ ನುಗ್ಗಿದ ಬಂದೂಕುಧಾರಿಗಳು ಗುಂಡಿನ ದಾಳಿ ಮಾಡಿದ್ದಾರೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಮೊದಲು ಏಳು ಮಂದಿ ಪುರುಷರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. 8ನೇ ವ್ಯಕ್ತಿ ಭಾನುವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಗೊಂಡವರಲ್ಲಿ ಗುಂಡೇಟಿನಿಂದ ತಪ್ಪಿಸಿಕೊಳ್ಳಲು ಹಾಸ್ಟೆಲ್ ಕೋಣೆಯ ಕಿಟಕಿಯಿಂದ ಹೊರಗೆ ಹಾರಿದ ವ್ಯಕ್ತಿಯೂ ಸೇರಿದ್ದಾರೆ. ಕೊಠಡಿಯಲ್ಲಿ 12 ಮಂದಿ ಮದ್ಯ ಸೇವಿಸುತ್ತಿದ್ದರು. ಅವರಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.