ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯಿಂದಾಗಿ ಪೆಂಡಲ್ ಕುಸಿದು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಎಂಟು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಮಧ್ಯಪ್ರದೇಶದ ದಾಮೋಹ್ನಲ್ಲಿ ನಡೆದಿದೆ.
ಅಧಿಕಾರಿಗಳ ಪ್ರಕಾರ, ನಿನ್ನೆ ರಾತ್ರಿ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ದಾಮೋಹ್ನಲ್ಲಿ ಮದುವೆಯ ಪಂಡಲ್ ಕುಸಿದು ಸುಮಾರು 7-8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಬಲ್ಪುರಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.