Tuesday, November 11, 2025

ಕೆಂಪುಕೋಟೆ ಬಳಿ ಕಾರು ಸ್ಫೋಟಕ್ಕೆ 8 ಮಂದಿ ಬಲಿ: ದೆಹಲಿ, ಮುಂಬೈ ಸೇರಿ ಹಲವು ನಗರದಲ್ಲಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 8 ಮಂದಿ ಮೃತಪಟ್ಟ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಕಾರು ಸ್ಫೋಟಗೊಂಡಿದೆ. ಕೆಲವೇ ಕ್ಷಣದಲ್ಲಿ ಪಕ್ಕದಲ್ಲೇ ಇದ್ದ ಮತ್ತೊಂದು ಕಾರು ಸ್ಫೋಟಗೊಂಡಿದೆ. ಇದರ ಬೆಂಕಿಯ ಜ್ವಾಲೆಗೆ ಹಲವು ಕಾರುಗಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ದೆಹಲಿ ಕಾರು ಸ್ಫೋಟದಿಂದ ದೆಹಲಿಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಇತ್ತ ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೂ ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿಯ ಫರಿದಾಬಾದ್ ಉಗ್ರರ ಪ್ಲಾನ್ ವಿಫಲಗೊಳಿಸಿದ ಬೆನ್ನಲ್ಲೇ ಸ್ಫೋಟ
ದೆಹಲಿಯ ಫರಿದೀಬಾದ್ ಬಳಿ ಭಯೋತ್ಪಾದಕರ ದಾಳಿ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿತ್ತು. ಎರಡು ಮನೆಗಳಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. 2,500 ಕೆಜಿಗೂ ಹೆಚ್ಚು ಸ್ಫೋಟಕ ಪತ್ತೆಯಾಗಿತ್ತು. ಭಯೋತ್ಪಾದಕರ ಈ ಕೃತ್ಯವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿ ದಾಳಿ ವಿಫಲಗೊಳಿಸಿತ್ತು. ಇದರ ಬೆನ್ನಲ್ಲೇ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿದೆ. ಹೀಗಾಗಿ ಅನುಮಾನಗಳು ಹೆಚ್ಚಾಗಿದೆ. ಇದೇ ಕಾರಣಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ನೀಡಲಾಗಿದೆ. ದೆಹಲಿಯಿಂದ ಹೊರಹೋಗುವ, ಒಳ ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಮುಂಬೈನಲ್ಲೂ ಭದ್ರತೆ ಹೆಚ್ಚಳ ಮಾಡಲಾಗಿದ್ದು, ತೀವ್ರ ತಪಾಸಣೆ ನಡೆಯುತ್ತಿದೆ.

7 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ
2 ಕಾರು ಸ್ಫೋಟದಿಂದ ಪಕ್ಕದಲ್ಲಿದ್ದ ಹಲವು ಕಾರುಗಳಿಗೂ ಬೆಂಕಿ ಹೊತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. 7 ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಕಾರಣ ನಂದಿಸಲು ಕೆಲ ಸಮಯವೇ ಬೇಕಾಗಿತ್ತು.

error: Content is protected !!