ಕರ್ನಾಟಕದಲ್ಲಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ಬಂದಿದೆ-ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಕರ್ನಾಟಕ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಂಟು ಶಾಸಕರು ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಲ್ಲಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದರು.

ʻಇಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದಾರೆ, ನಾನು ಅದಕ್ಕೆ ಹೋಗುತ್ತಿದ್ದೇನೆ. ಕರ್ನಾಟಕದಲ್ಲಿ ಹೊಸ ಮತ್ತು ಬಲಿಷ್ಠ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದಕ್ಕೆʼ ಸಂತೋಷವಾಗಿದೆ ಎಂದರು.

ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಗುರುವಾರ ಘೋಷಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!