Monday, September 25, 2023

Latest Posts

SHOCKING| ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ: ಆಕ್ಸಿಜನ್‌ ಸಿಗದೆ 8 ರೋಗಿಗಳ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಮ್ಲಜನಕ ಕೊರತೆಯಿಂದ ಎಂಟು ರೋಗಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಆದರೆ, ಎಂಐಸಿಯು ವಾರ್ಡ್‌ನಲ್ಲಿ 6 ಮಂದಿ ಮಾತ್ರ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಡಾಕ್ಟರರ್‌ಗಳು ಸುಳ್ಳು ಹೇಳುತ್ತಿದ್ದಾರೆಂದೂ ನಿಜವಾಗಿ ಎಂಟು ಮಂದಿ ಸಾವನ್ನಪ್ಪಿರುವುದಾಗಿ ರೋಗಿಗಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದರು.

ಜಿಲ್ಲೆಯ ನೆಲ್ಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ಬೆಳಕಿಗೆ ಬರುತ್ತಿದ್ದಂತೆ, ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂದೆ ಜಮಾಯಿಸಿ ಗದ್ದಲ-ಗಲಾಟೆ ಸೃಷ್ಟಿಸಿದರು. ಮತ್ತೊಂದೆಡೆ, ಆಸ್ಪತ್ರೆ ಆಡಳಿತವು ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ರೋಗಿಗಳು ರೋಗ ರುಜಿನಗಳಿಗೆ ತುತ್ತಾಗಿ ಸಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ ಎನ್ನುತ್ತಾರೆ ವೈದ್ಯರು. ನೆಲ್ಲೂರು ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯ ಕೊರತೆಯಿಂದ ಸಂಭವಿಸಿದ ಸಾವುಗಳ ಕುರಿತು ಸರ್ಕಾರಿ ಆಸ್ಪತ್ರೆಯ ಅಧೀಕ್ಷಕರು ವರದಿ ಸಲ್ಲಿಸಿದ್ದು, ಅದರಲ್ಲಿ ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ಸಲ್ಲಿಸಿದ ವರದಿಯಲ್ಲಿ ನಿರಾಕರಿಸಿದ್ದಾರೆ. ಬೇರೆ ಬೇರೆ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ವರದಿ ಹೇಳಿದೆ.

ಈ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದ ಆಸ್ಪತ್ರೆ ಅಧೀಕ್ಷಕ ಸಿದ್ಧಾ ನಾಯ್ಕ, ಕೆಲವರು ಆಸ್ಪತ್ರೆಯ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇತರ ಕಾಯಿಲೆಗಳಿಂದ ರೋಗಿಗಳು ಸಾವನ್ನಪ್ಪಿದ್ದರೆ, ಅವರ ಸಾವಿಗೆ ಆಸ್ಪತ್ರೆಯಲ್ಲಿ ಆಮ್ಲಜನಕದ ಇಲ್ಲದಿರುವುದು ಕಾರಣ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದರು. ಆದರೆ, ಈ ಘಟನೆಯಲ್ಲಿ ಎಷ್ಟು ಸತ್ಯ, ಎಷ್ಟು ಅಸತ್ಯ ಇದೆ ಎಂದು ವಿಚಾರಣೆ ಬಳಿಕವಷ್ಟೇ ತಿಳಿದು ಬರಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!