ಭೀಕರ ರೈಲು ಅಪಘಾತ: ಎಂಟು ಮಂದಿ ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರೈಲು​ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಸಾವು ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಥಾಯ್ಲೆಂಡ್​ನಲ್ಲಿ ಶುಕ್ರವಾರ ನಡೆದಿದೆ.

ಥಾಯ್ಲೆಂಡ್​ನ ಚಾಚೋಂಗ್ಸಾವೊ ಪ್ರಾಂತ್ಯದ ಮುಯಾಂಗ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಟ್ರಕ್​ ವಾಹನವು ರೈಲು ಹಳಿ ದಾಟುತ್ತಿತ್ತು, ಈ ವೇಳೆ ಎದುರಿನಿಂದ ಬಂದ ಗೂಡ್ಸ್​ ರೈಲು ಟ್ರಕ್​ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಈ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!