ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಮರ ಬಿದ್ದ ಪರಿಣಾಮ 8 ಮಂದಿಗೆ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಯಲಾಚಿಪಾಳ್ಯ ಗ್ರಾಮದ ಬಳಿ ನಡೆದಿದೆ.
ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮದ್ದೂರು ತಾಲ್ಲೂಕಿನ ಹೊಸಕೆರೆ ಹಳ್ಳಿಗೆ ಹೋಗುವಾಗ ಇಂದು ಬೆಳಿಗ್ಗೆ ಈ ಅವಘಡ ಸಂಭವಿಸಿದೆ.
ಮರ ಬಿದ್ದ ಪರಿಣಾಮ ಟಾಟಾ ಏಸ್ ವಾಹನ ಸಂಪೂರ್ಣ ಜಖಂ ಆಗಿದೆ. ಘಟನೆಯಲ್ಲಿ 8 ಜನರಿಗೆ ಗಾಯಗಳಾಗಿದ್ದು ಡ್ರೈವರ್ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಹೇಳಿದ್ದಾರೆ.