ಸೇನಾ ಮುಖ್ಯಸ್ಥರ ವಿರುದ್ಧ ನಿಂದನಾತ್ಮಕ ಟ್ವೀಟ್‌; ಇಮ್ರಾನ್ ಖಾನ್ ಪಕ್ಷದ ಕಾರ್ಯಕರ್ತರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಹಾಗೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಎಂಟು ಸಾಮಾಜಿಕ ಮಾಧ್ಯಮ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ)ಯು ಈ ಕಾರ್ಯಕರ್ತರನ್ನು ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ವಶಕ್ಕೆ ಪಡೆದಿದೆ. ಮಾರ್ಚ್ 8 ರಂದು ಪಾಕ್‌ ಸಂಸತ್ತಿನಲ್ಲಿ ಮಂಡನೆಯಾದ ಅವಿಶ್ವಾಸ ನಿರ್ಣಯದಲ್ಲಿ ಇಮ್ರಾನ್‌ ಖಾನ್‌ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಲಾಗಿತ್ತು. ಆ ನಂತರದ ದಿನಗಳಲ್ಲಿ, ಸೇನೆಯ ಜನರಲ್ ಆದ ಬಾಜ್ವಾ ವಿರುದ್ಧದ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವ ಟ್ವೀಟ್‌ ಗಳು ಟ್ವಿಟರ್‌ನಲ್ಲಿ ಟಾಪ್ ಟ್ರೆಂಡಿಂಗ್‌ ನಲ್ಲಿತ್ತು.
ಸೇನಾ ಮುಖ್ಯಸ್ಥರು ಮತ್ತು ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆ ಮಾಡಿರುವ 50 ಶಂಕಿತರ ಪಟ್ಟಿಯನ್ನು ಗುಪ್ತಚರ ಸಂಸ್ಥೆಗಳಿಂದ ಸ್ವೀಕರಿಸಿದ್ದೇವೆ. ಅವರಲ್ಲಿ ಎಂಟು ಮಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಎಫ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!