ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆ ರಾಜ್ಯ ಆಂಧ್ರಪ್ರದೇಶದಲ್ಲಿ ಮಂಗನ ಕಾಯಿಲೆ ಪ್ರಕರಣವೊಂದು ಸಂಚಲನ ಮೂಡಿಸುತ್ತಿದೆ. ಗುಂಟೂರಿನಲ್ಲಿ ಎಂಟು ವರ್ಷದ ಬಾಲಕನಿಗೆ ಮಂಗನ ಕಾಯಿಲೆಯ ಲಕ್ಷಣಗಳನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಆ ಹುಡುಗ ಒಡಿಶಾದಿಂದ ಹದಿನೈದು ದಿನಗಳ ಹಿಂದೆ ಎಪಿಯ ಗುಂಟೂರಿಗೆ ಬಂದಿದ್ದು, ಒಂದು ವಾರದ ಬಳಿಕ ಅವನಲ್ಲಿ ಮಂಗನ ಕಾಯಿಲೆಯ ಲಕ್ಷಣಗಳನ್ನು ಗೋಚರಿಸಿವೆ ಎಂದಿದ್ದಾರೆ.
ಜ್ವರ ಮತ್ತು ಚರ್ಮದ ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕ ಮಾಡಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ಮುಂಜಾಗ್ರತಾ ಕ್ರಮವಾಗಿ ಶನಿವಾರ ಗುಂಟೂರು ಸರ್ಕಾರಿ ಆಸ್ಪತ್ರೆಗೆ (ಜಿಜಿಎಚ್) ಕರೆದೊಯ್ದು, ಅಲ್ಲಿ ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿದೆ. ಫಲಿತಾಂಶಗಳು ಇನ್ನಷ್ಟೇ ಬರಬೇಕಿದೆ.