Wednesday, September 28, 2022

Latest Posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: 24 ವರ್ಷದ ಆರೋಪಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಎಂಟು ವರ್ಷದ ಬಾಲಕಿ ಮೇಲೆ ಆಕೆಯ ಮನೆಯಲ್ಲಿ ಬಾಡಿಗೆದಾರನಾಗಿ ವಾಸಿಸುತ್ತಿದ್ದ ಯುವಕನೇ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಲಕ್ನೋದ ಗುಡಂಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ವಿನೋದ್ (24) ಎಂಬಾತನನ್ನು ಬಂಧಿಸಲಾಗಿದೆ.
ಘಟನೆ ನಡೆದ ಎರಡು ದಿನಗಳ ನಂತರ, ಬಾಲಕಿ ತನಗೆ ನೋವುಂಟಾಗುತ್ತಿರುವ ಕುರಿತಾಗಿ ಪೋಷಕರಿಗೆ ಹೇಳಿದ್ದಾಳೆ.  ಆ ಬಳಿಕ ಆಕೆಯ ಪೋಷಕರು ಅವಳನ್ನು ವೈದ್ಯರ ಬಳಿಗೆ ಕರೆದೊಯ್ದಿದ್ದಾರೆ. ಆ ಬಳಿಕ ಮಗುವಿನ ಮೇಲೆ ಅತ್ಯಾಚಾರ ಎಸಗಿದ ವಿಚಾರ ತಿಳಿದುಬಂದಿದೆ. ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!