ಕೊಳವೆಬಾವಿಗೆ ಬಿದ್ದ ಬಾಲಕ ಸಾವು: ಆಸ್ಪತ್ರೆಗೆ ಸಾಗಿಸಿದರೂ ಉಳಿಯದ ಜೀವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊಳವೆ ಬಾವಿಗೆ ಬಿದ್ದ ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಖೇರ್ಕೆಡಿ ಪತ್ತಾರ ಗ್ರಾಮದ ಲೋಕೇಶ್ ಅಹಿವಾರ್ ಎಂಬ ಎಂಟು ವರ್ಷದ ಬಾಲಕ ಆಟವಾಡುತ್ತಾ ಬೋರ್‌ವೆಲ್‌ಗೆ ಬಿದ್ದಿದ್ದಾನೆ.

ಮಂಗಳವಾರ ಬೆಳಗ್ಗೆ ಬಾಲಕ ಕೊಳವೆಬಾವಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್, ವೈದ್ಯಕೀಯ ತಂಡ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಾಲಕ ಬಿದ್ದ ಬೋರ್‌ವೆಲ್‌ 60 ಅಡಿ ಆಳವಿತ್ತು. ಆದಾಗ್ಯೂ, ಬಾಲಕ 49 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಬೋರ್ ವೆಲ್ ಗೆ ಸಮಾನಾಂತರವಾಗಿ ಮತ್ತೊಂದು ಹೊಂಡ ತೋಡಲಾಗಿದೆ. ಬಾಲಕನಿಗೆ ಟ್ಯೂಬ್ ಮೂಲಕ ಆಮ್ಲಜನಕ ನೀಡಲಾಯಿತು. 24 ಗಂಟೆಗಳ ಕಾಲ ಶ್ರಮದಾನದ ಬಳಿಕ ಬಾಲಕನನ್ನು ಹೊರಗೆ ತರಲಾಯಿತು.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾಧರೂ ಸ್ಥಿತಿ ಹದಗೆಟ್ಟಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ. “ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ ಆದರೆ ಮಗುವನ್ನು ಉಳಿಸಲು ಸಾಧ್ಯವಾಗದಿರುವುದು ವಿಷಾದಕರವಾಗಿದೆ, ಮುಖ್ಯಮಂತ್ರಿಗಳು ಕೂಡ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮಗುವಿನ ಕುಟುಂಬಕ್ಕೆ 4 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ” ಎಂದು ಜಿಲ್ಲಾಧಿಕಾರಿ ಉಮಾ ಶಂಕರ್ ಭಾರ್ಗವ್ ಹೇಳಿದರು.

ಕೊಳವೆ ಬಾವಿಗೆ ಮಕ್ಕಳು ಬಿದ್ದು ಪ್ರಾಣ ಕಳೆದುಕೊಳ್ಳುತ್ತಿರುವ ಆಘಾತಕಾರಿ ಘಟನೆಗಳು ಹೆಚ್ಚುತ್ತಿವೆ. ಮಕ್ಕಳ ಪಾಲಿಗೆ ಕೊಳವೆಬಾವಿಗಳು ಮೃತ್ಯು ಕೂಪಗಳಾಗುತ್ತಿದ್ದು, ಇವುಗಳನ್ನು ಸರಿಯಾಗಿ ಮುಚ್ಚುವ ಕಾರ್ಯ ನಡೆಯಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!