ಮೋದಿ ಸರ್ಕಾರಕ್ಕೆ 8 ವರ್ಷ: ಕಲಬುರಗಿಯಲ್ಲಿ ಮನೆ ಮನೆಗೆ ತೆರಳಿ ಯೋಜನೆಗಳ ಬಗೆಗೆ ಅರಿವು ಮೂಡಿಸಿದ ಬಿಜೆಪಿ ಕಾರ್ಯಕರ್ತರು

ಹೊಸದಿಗಂತ ವರದಿ ಕಲಬುರಗಿ :
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಹಲವು ಯೋಜನೆಗಳ ಬಗ್ಗೆ ಹೊರತಂದಿರುವ ಕಿರುಹೊತ್ತಿಗೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸಿ ಅರಿವು ಮೂಡಿಸಿದರು.

ನಗರದ ವಾರ್ಡ್ ನಂ-7ರ ಸಂಜಯ ಗಾಂಧಿ ನಗರದಲ್ಲಿ ಬಿಜೆಪಿ ಯುವ ಮುಖಂಡ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಮೋದಿ ಸರ್ಕಾರದ 8 ವರ್ಷಗಳ ಸಾಧನೆಯ ಬಗ್ಗೆ ತಿಳಿ ಹೇಳಲಾಯಿತು.

ಕಳೆದ 8 ವಷ೯ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥ ನಾಯಕತ್ವ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ಅಭೂತಪೂರ್ವ ಬೆಳವಣಿಗೆಯನ್ನು ಮಾಡುವುದರ ಮೂಲಕ ದೇಶದ ಜನರಿಗೆ ಹತ್ತು ಹಲವು ಜನಪರ ಯೋಜನೆಗಳನ್ನು ನೀಡಿದ್ದಾರೆ ಎಂದು ಚಂದು ಪಾಟೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ,ಬಿಜೆಪಿ ನಗರ ಜಿಲ್ಲಾ ಪ್ರದಾನ ಕಾರ್ಯದರ್ಶಿ ಉಮೇಶ್ ಪಾಟೀಲ,ಮಂಡಲ ಅಧ್ಯಕ್ಷ ಅಶೋಕ ಮಾನಕರ,ಮಹಾನಗರ ಪಾಲಿಕೆಯ ಸದಸ್ಯ ಕೃಷ್ಣ ನಾಯಕ,ಸಚಿನ ಕಡಗಂಚಿ ಸೇರಿದಂತೆ ಪಕ್ಷದ ಮುಖಂಡರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!