ಹೊಸದಿಗಂತ ಡಿಜಿಟಲ್ ಡೆಸ್ಕ್:
ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿದ 80 ಮಂದಿ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
ಜಿಲ್ಲೆಯ ಮೆಹರೂನಾ ಗ್ರಾಮದ ಪಂಡಿತ್ ದೀನದಯಾಳ್ ಉಪಾಧ್ಯಾಯ ಆಶ್ರಮದಲ್ಲಿ 80 ಮಕ್ಕಳು ಹೊಟ್ಟೆನೋವಿನ ದೂರು ನೀಡಿದ್ದಾರೆ. ಭಾನುವಾರ ರಾತ್ರಿ ಮಕ್ಕಳು ಊಟ ಮಾಡಿದ ನಂತರ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿ, ಬೇಧಿ ಆಗಿದೆ. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡಿದೆ.
ಸಂತ್ರಸ್ತ ವಿದ್ಯಾರ್ಥಿಗಳನ್ನು ಪರಿಶೀಲಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಿತ್ತಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ್ದಾರೆ.