ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೆಹಲಿಯ ಸರೋಜ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸೇರಿದಂತೆ 80 ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಲಸಿಕೆ ಪಡೆದಿದ್ದ ಓರ್ವ ವೈದ್ಯ ಬಲಿಯಾಗಿದ್ದಾರೆ.
ಈ ಬಗ್ಗೆ ಆಸ್ಪತ್ರೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಪಿ.ಕೆ. ಭಾರದ್ವಾಜ್ ಮಾತನಾಡಿ, ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 80ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಅವರಲ್ಲಿ 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಆಸ್ಪತ್ರೆಯಲ್ಲಿ ಕಳೆದ 27 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ.ಎ.ಕೆ. ರಾವತ್ ಅವರು ಕೊರೋನಾ ಲಸಿಕೆಯ ಎರಡು ಡೋಸ್ ಪಡೆದ ಬಳಿಕವೂ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.