Tuesday, March 21, 2023

Latest Posts

ಮೋದಿ ನೇತೃತ್ವದ ಸರ್ಕಾರದಿಂದ ಕಾಶ್ಮೀರದಲ್ಲಿ ಶೇ.80ರಷ್ಟು’ಹಿಂಸಾಚಾರ’ ಕಡಿಮೆಯಾಗಿದೆ : ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶಾದ್ಯಂತ ಕಾಶ್ಮೀರ, ಈಶಾನ್ಯ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಹಿಂಸಾಚಾರ ಶೇ.80 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜವಾಹರಲಾಲ್ ದರ್ದಾ ಅವರ ಜನ್ಮ ಶತಮಾನೋತ್ಸವ ಆಚರಿಸಲು ನಾಗ್ಪುರದಲ್ಲಿ ಲೋಕಮಾತ್ ಮೀಡಿಯಾ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ಮೋದಿ ಸರ್ಕಾರದ ಅಡಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ, ಈಶಾನ್ಯದಲ್ಲಿ ದಂಗೆ ಮತ್ತು ಎಡಪಂಥೀಯ ಉಗ್ರವಾದದಿಂದ ಹಿಂಸಾಚಾರದಲ್ಲಿ ಶೇ. 80 ರಷ್ಟು ಕಡಿಮೆಯಾಗಿದೆ. ಕಾಶ್ಮೀರ ಕಣಿವೆಯಲ್ಲಿ ಪ್ರವಾಸೋದ್ಯಮ ಒಳಹರಿವು ಹೆಚ್ಚಿದೆ. ಇತ್ತೀಚಿನ ವರ್ಷಗಳಲ್ಲಿ ಸುಮಾರು 1.8 ಕೋಟಿ ಪ್ರವಾಸಿಗರು ಕಣಿವೆಗೆ ಭೇಟಿ ನೀಡಿದ್ದಾರೆ ಎಂದು ಶಾ ಸಮಾರಂಭದಲ್ಲಿ ಹೇಳಿದ್ದಾರೆ.

ಕಾಶ್ಮೀರದಲ್ಲಿ 70 ವರ್ಷಗಳಲ್ಲಿ 12,000 ಕೋಟಿ ರೂಪಾಯಿ ಹೂಡಿಕೆಯಾಗಿದೆ. ಆದರೆ ಮೋದಿ ಸರ್ಕಾರದ ಅಡಿಯಲ್ಲಿ ಕೇವಲ ಮೂರು ವರ್ಷಗಳಲ್ಲಿ 12,000 ಕೋಟಿ ರೂ. ಗಳಿಸಿದೆ. ಈಶಾನ್ಯದ ಜನರು ವರ್ಷಗಳಿಂದ ವಿರೋಧಿಸುತ್ತಿದ್ದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು ಸುಮಾರು 60 ಪ್ರತಿಶತದಷ್ಟು ಪ್ರದೇಶದಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!