ರಾಜಧಾನಿಯಲ್ಲಿ ನಮೋ ರೋಡ್‌ ಶೋ: ಪ್ರಧಾನಿ ಭದ್ರತೆಗೆ 8 ಸಾವಿರ ಪೊಲೀಸರ ನಿಯೋಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆಯ ದಿನ ಸಮೀಪಿಸುತ್ತಿದೆ. ಈಗ ನಾಯಕರ ದಂಡೇ ಅಬ್ಬರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಬಿಜೆಪಿ ಒಂದು ಕೈ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಎಂಬ ಬ್ರಹ್ಮಾಸ್ತ್ರದ ಮೂಲಕ ಮತಬೇಟೆಯಾಡುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಧಾನಿಯವರ ಭದ್ರತೆಗೆ 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಭಾಗಿಯಾಗಲಿದ್ದಾರೆ. ಸಂಚಾರಿ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಹತ್ತು ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋಗೆ ಭದ್ರತೆ ನೀಡಿದ್ದಾರೆ.

ನರೇಂದ್ರ ಮೋದಿ ಅವರ ರೋಡ್ ಶೋ ಸಾಗುವ ಮಾರ್ಗ ಮಧ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸೂಕ್ಷ್ಮ ಪ್ರದೇಶವಾದ ಚಾಮರಾಜಪೇಟೆ ಕ್ಷೇತ್ರದ ಶಿರಸಿ ಸರ್ಕಲ್​​ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ನಾಳೆ ಈ ಮಾರ್ಗದಲ್ಲಿ ವಾಹನ ಸವಾರರು ಸಂಚರಿಸದಂತೆ ಪೊಲೀಸರಿಂದ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!