ಸರಕಾರಿ ಜಮೀನು ಮಂಜೂರಾತಿ ಕೋರಿ 820 ಮಾಜಿ ಸೈನಿಕರಿಂದ ಅರ್ಜಿ: ಸಚಿವ ಆರ್.ಅಶೋಕ್

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಮಂಜೂರಾತಿಗಾಗಿ ಇದುವರೆಗೆ ಒಟ್ಟು 820 ಮಾಜಿ ಸೈನಿಕರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 176 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್’ನಲ್ಲಿ ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಪ್ರಸಕ್ತ 644 ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿದ್ದು, ಅರ್ಜಿದಾರರು ಮಂಜೂರು ಮಾಡುವಂತೆ ಕೋರಿರುವ ಜಮೀನು ಭೂ ಲಭ್ಯತಾ ಪಟ್ಟಿಯಲ್ಲಿ ಲಭ್ಯವಿಲ್ಲದಿರುವುದರಿಂದ ಈ ಅರ್ಜಿಗಳು ಬಾಕಿ ಉಳಿದಿವೆ ಎಂದು ಸ್ಪಷ್ಟಪಡಿಸಿದರು.
ಭೂ ಲಭ್ಯತಾ ಪಟ್ಟಿಯನ್ವಯ ಜಮೀನು ಲಭ್ಯವಿಲ್ಲದಿದ್ದಲ್ಲಿ, ಜಮೀನಿಗೆ ಬದಲಾಗಿ ಗ್ರಾಮೀಣ ಪ್ರದೇಶಗಳಲ್ಲಿ 2400 ಚದರ ಅಡಿ ಅಳತೆಯ ಅಥವಾ ನಗರ ಪ್ರದೇಶಗಳಲ್ಲಿ 1200 ಚದರ ಅಡಿ ಅಳತೆಯ ನಿವೇಶನವನ್ನು ಮಂಜೂರು ಮಾಡಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳಲ್ಲಿ ಅವಕಾಶ ಕಲ್ಪಿಸಿ 2021ರ ಅಕ್ಟೋಬರ್ 27ರಂದು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಬಾಕಿ ಉಳಿದಿರುವ ಅರ್ಜಿಗಳನ್ನು ನಿಯಮಾನುಸಾರ ವಿಲೇಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!