ವಯನಾಡ್ ಭೂಕುಸಿತಕ್ಕೆ 84 ಮಂದಿ ಸಾವು: ಕೇರಳದಲ್ಲಿ ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಸುಮಾರು 84 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಜುಲೈ 30 ಮತ್ತು 31ರಂದು ಕೇರಳ ಸರ್ಕಾರ ಶೋಕಾಚರಣೆ ಘೋಷಿಸಿದೆ.

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 84 ಜನರು ಸಾವನ್ನಪ್ಪಿದ್ದಾರೆ, 116 ಜನರು ಗಾಯಗೊಂಡಿದ್ದಾರೆ ಮತ್ತು ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಕೇರಳದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳನ್ನು ಸಹ ಸಜ್ಜುಗೊಳಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಈ ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದ ಕಾರಣ ರಕ್ಷಣಾ ಪ್ರಯತ್ನಗಳು ಸವಾಲಾಗಿ ಉಳಿದಿವೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!